ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯೋರ್ವರ ಮೃತದೇಹವು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿ ಯಾರು, ಯಾವ ಊರಿನವರು ಮತ್ತು ಸಾವಿಗೆ ನಿಖರ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಶವದ ಗುರುತು ಪತ್ತೆ ಮತ್ತು ಸಾವಿಗೆ ಕಾರಣ ತಿಳಿದುಬರಲು ಹೆಚ್ಚಿನ ಮಾಹಿತಿ ವಿಚಾರಣೆ ನಂತರ ಇನ್ನಷ್ಟೇ ತಿಳಿಯಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp


0 Comments