ಛತ್ತೀಸ್‌ಗಢದಲ್ಲಿ ಭೀಕರ ರೈಲು ದುರಂತ: ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ, 6 ಸಾವು

 

Ad
ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಭೀಕರ ರೈಲು ದುರಂತ ಸಂಭವಿಸಿದ್ದು, ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಿಲಾಸ್‌ಪುರ-ಕಟ್ಟಿ ಮಾರ್ಗದಲ್ಲಿ ಬರುವ ಲಾಲ್‌ಖಾದನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೊರ್ಬಾ ಪ್ಯಾಸೆಂಜರ್ ರೈಲು ಮುಂದೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ಯಾಸೆಂಜರ್ ರೈಲಿನ ಕೆಲವು ಬೋಗಿಗಳು ಸಂಪೂರ್ಣವಾಗಿ ಹಳಿತಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯ ಆರಂಭ, ಸಂಚಾರ ಅಸ್ತವ್ಯಸ್ತ:

ಅಪಘಾತದ ತಕ್ಷಣವೇ ಸ್ಥಳೀಯರು, ರೈಲ್ವೆ ರಕ್ಷಣಾ ತಂಡ (ಆರ್‌ಆರ್‌ಟಿ), ರೈಲ್ವೆ ಪೊಲೀಸ್ ಪಡೆ (ಆರ್‌ಪಿಎಫ್) ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಬೋಗಿಗಳಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ನೆರವು ಒದಗಿಸಲಾಗುತ್ತಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಓವರ್‌ಹೆಡ್ ತಂತಿಗಳು ಮತ್ತು ಸಂಪೂರ್ಣ ಸಿಗ್ನಲ್ ವ್ಯವಸ್ಥೆ ತೀವ್ರವಾಗಿ ಹಾನಿಗೊಳಗಾಗಿದ್ದು, ಆ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮಾರ್ಗ ಬದಲಾವಣೆ, ತೆರವು ಕಾರ್ಯ ಭರದಿಂದ:

ರೈಲು ಅಪಘಾತದ ಮಾಹಿತಿ ತಿಳಿದ ಕೂಡಲೇ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಹಳಿತಪ್ಪಿದ ಮತ್ತು ಹಾನಿಗೊಳಗಾದ ಬೋಗಿಗಳನ್ನು ತೆರವುಗೊಳಿಸುವ ಹಾಗೂ ರೈಲು ಮಾರ್ಗವನ್ನು ಪುನಃಸ್ಥಾಪಿಸುವ ಕಾರ್ಯವು ಭರದಿಂದ ಸಾಗಿದೆ. ಈ ದುರಂತದ ಕಾರಣದಿಂದ ಆ ಮಾರ್ಗದಲ್ಲಿ ಸಂಚರಿಸಬೇಕಿದ್ದ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಇನ್ನು ಕೆಲವು ರೈಲುಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಬಗ್ಗೆ ರೈಲ್ವೆ ಇಲಾಖೆಯು ತನಿಖೆ ಆರಂಭಿಸಿದೆ.

For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp

Post a Comment

0 Comments