ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಣಿ-ಪುತ್ತೂರು ರಸ್ತೆಯ ಮಾಣಿ ಮಠದ ಬಳಿ ಕುಶಾಲನಗರದಿಂದ ಪಣೋಲಿಬೈಲ್ ಕ್ಷೇತ್ರಕ್ಕೆ ಕುಟುಂಬ ಸಮೇತ ಬರುತ್ತಿದ್ದಾಗ ಓಮ್ನಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಚಾಲಕನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರಾದ ವಿಕ್ಕಿ ಶೆಟ್ಟಿ ಮಾಣಿ ಮತ್ತು ಅವರ ತಂಡದವರು ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯ ಮಾಹಿತಿ ತಿಳಿದ ಕೂಡಲೇ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


0 Comments