ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇಯ ಆಗ್ರಾ-ನೋಯ್ಡಾ ಲೇನ್‌ನಲ್ಲಿ ದಟ್ಟವಾದ ಮಂಜಿನಿಂದಾಗಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿರುವ ಘೋರ ಘಟನೆ ನಡೆದಿದೆ. ಮೈಲ್‌ಸ್ಟೋನ್ 127ರ ಬಳಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮೂರು ಕಾರುಗಳು ಹಾಗೂ ಏಳು ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ.
ದಟ್ಟ ಮಂಜಿನ ಕಾರಣ ರಸ್ತೆ ಸರಿಯಾಗಿ ಕಾಣಿಸದಿದ್ದಾಗ ಮೊದಲು ಮೂರು ಕಾರುಗಳು ಡಿಕ್ಕಿ ಹೊಡೆದುಕೊಂಡಿವೆ. ಅದರ ಬೆನ್ನಲ್ಲೇ ವೇಗವಾಗಿ ಬಂದ ಒಂದು ಸರ್ಕಾರಿ ಬಸ್ ಹಾಗೂ ಆರು ಸ್ಲೀಪರ್ ಬಸ್‌ಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಪರಿಣಾಮವಾಗಿ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಎಲ್ಲ ಬಸ್‌ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಧಾವಿಸಿದ 11 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಸದ್ಯ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0 Comments