ಉಪ್ಪಿನಂಗಡಿ, ಆ. 2: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಇಂದು ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ.
ಸ್ಥಳೀಯರು ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ.
ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಪುರುಷ ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದರೆ ಅಥವಾ ಮೃತನ ಬಗ್ಗೆ ಮಾಹಿತಿ ಇದ್ದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


0 Comments