ಕರಾವಳಿ, ಮಲೆನಾಡಿನಲ್ಲಿ ಮಳೆ ಆರ್ಭಟ: ನದಿಗಳು ಭರ್ತಿ, ಹಲವೆಡೆ ರೆಡ್ ಅಲರ್ಟ್!

 



ಬೆಂಗಳೂರು:ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ತಸ್ತಪುರತಗೊಂಡಿದೆ. ಮುಂದಿನ ಒಂದು ವಾರಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.




ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರು ನದಿಗೆ ಇಳಿಯದಂತೆ ನಿರ್ಬಂಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಶೃಂಗೇರಿ ಹಾಗೂ ಕಳಸ ಭಾಗಗಳಲ್ಲೂ ನಿರಂತರ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇತ್ತ ನೆರೆರಾಜ್ಯ ಕೇರಳದ ಕಾಸರಗೋಡು, ವಯನಾಡ್ ಸೇರಿದಂತೆ ಹಲವು ಜಿಲ್ಲೆಗಳಿಗೂ ಮುಂದಿನ ಕೆಲ ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

Post a Comment

0 Comments